ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವಿದ್ಯುತ್ ಅವಘಡದಿಂದ  ಮೈಸೂರು ಜಿಲ್ಲೆಯಲ್ಲಿ 2 ಸಾವು...!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 24-04-2026

ವಿದ್ಯುತ್ ಅವಘಡದಿಂದ ಮೈಸೂರು ಜಿಲ್ಲೆಯಲ್ಲಿ 2 ಸಾವು...!

ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್​ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ ನೀರು ಹಾಯಿಸಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನು ಅರಿಯದೆ ತುಳಿದ ಪರಿಣಾಮ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ 22 ವರ್ಷದ ಯುವಕ ಪುನೀತ್ ವಿದ್ಯುತ್ ಶಾಕ್‌ಗೆ ಬಲಿಯಾಗಿದ್ದಾನೆ. ಪಕ್ಕದ ಜಮೀನಿನ ಪಂಪ್‌ಸೆಟ್ ಮೋಟಾರ್ ದುರಸ್ತಿ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ. ನೀರಿನ ತೊಟ್ಟಿಗೆ ಇಳಿದು ಮೋಟಾರ್ ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಪುನೀತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಪುನೀತ್ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಎರಡು ಘಟನೆಗಳೂ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಂಬಂಧಿತ ಪ್ರಕರಣಗಳು ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+