ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....
ಆಫ್ರಿಕಾ ದೇಶಗಳಲ್ಲಿ ಹರಡುತ್ತಿರುವ ಅಪಾಯಕಾರಿ ಎಬೋಲಾ ವೈರಸ್ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಆರೋಗ್ಯ ಸಚಿವಾಲಯವು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲವಾದರೂ, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪ್ರಮುಖ ಮಾರ್ಗಸೂಚಿಗಳು ಮತ್ತು ಅಗತ್ಯ ಮಾಹಿತಿಯ ವಿವರ ಇಲ್ಲಿದೆ. ಪ್ರಮುಖ ಮಾರ್ಗಸೂಚಿಗಳು ಮತ್ತು ಸಿದ್ಧತೆಗಳುಆಸ್ಪತ್ರೆಗಳ ಸಜ್ಜು ಎಬೋಲಾ ರೋಗ ಲಕ್ಷಣಗಳ ಪತ್ತೆ ಹಾಗೂ ವಿಶೇಷ ಚಿಕಿತ್ಸೆಗಾಗಿ ರಾಜ್ಯದ ಪ್ರಮುಖ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ.ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಆಫ್ರಿಕಾ ಹಾಗೂ ಹೈ-ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ.ಪ್ರಯಾಣಿಕರ ನಿಗಾ: ಸೋಂಕಿತ ದೇಶಗಳಿಂದ ಬಂದ ಪ್ರಯಾಣಿಕರು ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣವೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಎಬೋಲಾ ವೈರಸ್‌ನ ಪ್ರಮುಖ ಲಕ್ಷಣಗಳುಸೋಂಕು ತಗುಲಿದ ವ್ಯಕ್ತಿಯಲ್ಲಿ ಈ ಕೆಳಗಿನ ಲಕ್ಷಣಗಳು ಪ್ರಮುಖವಾಗಿ ಕಾಣಿಸಿಕೊಳ್ಳುತ್ತವೆ.ತೀವ್ರ ಜ್ವರ ಮತ್ತು ತಲೆನೋವುಅತಿಯಾದ ಸುಸ್ತು ಮತ್ತು ಸ್ನಾಯುಗಳ ನೋವುಗಂಟಲು ನೋವು ಹಾಗೂ ವಾಂತಿ, ಭೇದಿಸೋಂಕು ಉಲ್ಬಣಗೊಂಡರೆ ಆಂತರಿಕ ಮತ್ತು ಬಾಹ್ಯ ರಕ್ತಸ್ರಾವ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆಗಳುಪ್ರಯಾಣದ ಸಂದರ್ಭದಲ್ಲಿ ಜಾಗ್ರತೆ: ಎಬೋಲಾ ಪೀಡಿತ ದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸುವುದನ್ನು ತಪ್ಪಿಸುವುದು ಉತ್ತಮ.ಸಂಪರ್ಕದಿಂದ ದೂರವಿರಿ ಸೋಂಕಿತ ಲಕ್ಷಣಗಳುಳ್ಳ ವ್ಯಕ್ತಿಗಳು ಮತ್ತು ಅವರ ದೈಹಿಕ ದ್ರವಗಳ (ಲಾಲಾರಸ, ರಕ್ತ ಇತ್ಯಾದಿ) ನೇರ ಸಂಪರ್ಕಕ್ಕೆ ಬಾರದಂತೆ ಎಚ್ಚರ ವಹಿಸಿ.ಸ್ವಚ್ಛತೆಗೆ ಆದ್ಯತೆ: ನಿಯಮಿತವಾಗಿ ಸೋಪಿನಿಂದ ಕೈಗಳನ್ನು ತೊಳೆದುಕೊಳ್ಳಿ ಅಥವಾ ಸ್ಯಾನಿಟೈಸರ್ ಬಳಸಿ ಎಂದು ತಿಳಿಸಲಾಗಿದೆ .