ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 76 ವರ್ಷದ ವೃದ್ಧೆಯ ಮೇಲೆ 56ರ ಕಾಮಾಂಧನ ಅಟ್ಟಹಾಸ!
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 07-05-2026

76 ವರ್ಷದ ವೃದ್ಧೆಯ ಮೇಲೆ 56ರ ಕಾಮಾಂಧನ ಅಟ್ಟಹಾಸ!

ಮಾನವೀಯತೆ ತಲೆತಗ್ಗಿಸುವ ಘಟನೆಯೊಂದು ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 76 ವರ್ಷದ ವೃದ್ಧೆಯ ಮೇಲೆ 56 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚೆನ್ನೈನ ಪುಳಿಯಂತೋಪು ಎಂಬಲ್ಲಿ ನಡೆದಿದೆ. ವೃದ್ಧೆಯ ಅಸಹಾಯಕತೆಯನ್ನು ಬಳಸಿಕೊಂಡ ಕಾಮಾಂಧನನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ​ಪುಳಿಯಂತೋಪು ನಿವಾಸಿ ಅಲಿರಾಣಿ (76) ಎಂಬುವವರು ಪತಿಯನ್ನು ಕಳೆದುಕೊಂಡು ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇವರಿಗೆ ನಾಲ್ವರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಪುತ್ರಿ ಗೀತಾ ಆಗಾಗ ಬಂದು ತಾಯಿಯ ಯೋಗಕ್ಷೇಮ ವಿಚಾರಿಸುತ್ತಿದ್ದರು. ನಿನ್ನೆ ಸಂಜೆ ತಾಯಿಯನ್ನು ನೋಡಲು ಬಂದಾಗ ಅಲಿರಾಣಿ ಧರಿಸಿದ್ದ ನೈಟಿ ಹರಿದಿರುವುದನ್ನು ಕಂಡು ಗೀತಾ ಆತಂಕಗೊಂಡಿದ್ದರು. ವಯೋಸಹಜ ಅಸ್ವಸ್ಥತೆಯಿಂದ ತಾಯಿ ಸರಿಯಾಗಿ ಏನನ್ನೂ ಹೇಳಲಾಗದ ಸ್ಥಿತಿಯಲ್ಲಿದ್ದರು. ​ಗೀತಾ ಅವರು ತಾಯಿಯನ್ನು ಸ್ನಾನ ಮಾಡಿಸಲು ಕರೆದೊಯ್ದಾಗ, ತಾಯಿಯ ದೇಹದ ಮೇಲಿದ್ದ ಗಾಯದ ಗುರುತುಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಪ್ರೀತಿಯಿಂದ ವಿಚಾರಿಸಿದಾಗ ಅದೇ ಭಾಗದ ಮರುದು ಅಲಿಯಾಸ್ ಮರುದಪ್ಪನ್ (56) ಎಂಬಾತ ಮಧ್ಯಾಹ್ನ ಮನೆಗೆ ನುಗ್ಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾಗಿ ತಿಳಿದುಬಂದಿದೆ. ​ತಕ್ಷಣ ಗೀತಾ ಅವರು ತಾಯಿಯನ್ನು ಎಗ್ಮೋರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪುಳಿಯಂತೋಪು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯ ಮನೆಗೆ ಹೋದಾಗ ಆತ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದನು. ವಿಶೇಷ ತಂಡ ರಚಿಸಿದ ಪೊಲೀಸರು ಮೊಬೈಲ್ ಸಿಗ್ನಲ್ ಆಧರಿಸಿ ಕೂಡುವಾಂಜೇರಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಸುತ್ತುವರಿದು ಬಂಧಿಸಿದ್ದಾರೆ. ​ಬಂಧಿತ ಮರುದು ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದನು. 12 ವರ್ಷಗಳ ಹಿಂದೆಯೇ ಈತನ ಪತ್ನಿ ಈತನನ್ನು ಬಿಟ್ಟು ಹೋಗಿದ್ದಳು. ಈ ಪ್ರದೇಶದಲ್ಲಿ ಕೆಲಸಕ್ಕೆ ಬರುತ್ತಿದ್ದ ಆತ, ಅಜ್ಜಿ ಒಬ್ಬರೇ ಇರುವುದನ್ನು ಗಮನಿಸಿ ಈ ಕೃತ್ಯವೆಸಗಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಸದ್ಯ ಪೊಲೀಸರು ಈತನ ಮೇಲೆ ಕಠಿಣ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+