ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ನೀರಿನ ಮಟ್ಟ ಕುಸಿತ:  ಕೆಆರ್‌ಎಸ್, ಕಬಿನಿ ಜಲಾಶಯ ಖಾಲಿ ಖಾಲಿ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ನೀರಿನ ಮಟ್ಟ ಕುಸಿತ: ಕೆಆರ್‌ಎಸ್, ಕಬಿನಿ ಜಲಾಶಯ ಖಾಲಿ ಖಾಲಿ...!

ಮೈಸೂರು: ಬೇಸಿಗೆಯ ಪ್ರಖರತೆ ಹೆಚ್ಚಳವಾಗುತ್ತಿದ್ದಂತೆ ಮೈಸೂರು ಭಾಗದ ಜನರ ಎದೆಯಲ್ಲಿ ಈಗ ನಡುಕ ಶುರುವಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನ ದಾಹ ತಣಿಸುವ, ರೈತರ ಪಾಲಿನ ಕಾಮಧೇನು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಭೀತಿ ಹುಟ್ಟಿಸುವಷ್ಟು ಕುಸಿದಿದೆ. ಅತ್ತ ಮಳೆರಾಯ ಅಲ್ಲಲ್ಲಿ ದರ್ಶನ ನೀಡುತ್ತಿದ್ದರೂ, ಜಲಾಶಯಗಳ ಒಳಹರಿವು ಕಡಿಮೆಯಾಗಿದೆ . 2026ರ ಆರಂಭದಲ್ಲಿ ಭರ್ತಿಯಾಗಿದ್ದ ಕೆಆರ್‌ಎಸ್ ಅಣೆಕಟ್ಟು ಈಗ ಸೊರಗುತ್ತಿದೆ. 124.80 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಈಗ ಇರೋದು ಕೇವಲ 104.64 ಅಡಿ ನೀರು ಮಾತ್ರ. ಅಚ್ಚರಿಯ ವಿಷಯವೆಂದರೆ, ಜಲಾಶಯಕ್ಕೆ ಕೇವಲ 165 ಕ್ಯೂಸೆಕ್ಸ್ ನೀರು ಒಳಹರಿವು ಬರುತ್ತಿದ್ದರೆ, ಹೊರಹರಿವು ಮಾತ್ರ ಬರೋಬ್ಬರಿ 4308 ಕ್ಯೂಸೆಕ್ಸ್ ತಲುಪಿದೆ. ಅಂದರೆ, ಬರುವ ನೀರಿಗಿಂತ ಹೋಗುವ ನೀರೇ ಸಾವಿರ ಪಟ್ಟು ಹೆಚ್ಚು. ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಬರುವುದು ನಿಶ್ಚಿತ ಎಂಬ ಮಾತುಗಳು ಕೇಳಿಬರುತ್ತಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಪರಿಸ್ಥಿತಿಯೂ ಕೆ ಆರ್ ಎಸ್ ಭಿನ್ನವಾಗಿಲ್ಲ. 2284 ಅಡಿ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಈಗ ಕೇವಲ 2265.52 ಅಡಿ ನೀರು ಬಾಕಿ ಉಳಿದಿದೆ. ಇಲ್ಲಿಗೆ ಕೇವಲ 109 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದರೆ, ಹೊರಕ್ಕೆ 1500 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ಮಳೆ ಬಾರದಿದ್ದರೆ ಪರಿಸ್ಥಿತಿ ಕೈಮೀರುವ ಲಕ್ಷಣಗಳು ಗೋಚರಿಸುತ್ತಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+