ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ! ಉಲ್ಟಾ ಹೊಡೆದ ಮಹಿಳೆ
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 13-04-2026

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ! ಉಲ್ಟಾ ಹೊಡೆದ ಮಹಿಳೆ

ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ತಮಗೆ ಸ್ವಾಮೀಜಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದು. ಸ್ವಾಮೀಜಿ ಕೂಡ ಮಹಿಳೆ ವಿರುದ್ಧ ಬ್ಲಾಕ್‌ಮೇಲ್‌ ಆರೋಪದ ಮೇಲೆ ಪ್ರತಿದೂರು ದಾಖಲಿಸಿದ್ದರು . ಮಹಿಳಾ ಆಯೋಗಕ್ಕೆ ಮಹಿಳೆ ನೀಡಿರುವ ದೂರಿನಲ್ಲಿ; ನನ್ನ ವೈಯಕ್ತಿಕ ಜೀವನದ ಕೆಲವು ಖಾಸಗಿ ವಿಡಿಯೋಗಳು ಸ್ವಾಮೀಜಿ ಬಳಿಯಿವೆ. ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕುತ್ತಿದ್ದಾರೆ. ತಮ್ಮ ಲೈಂಗಿಕ ಇಚ್ಛೆಗೆ ಸಹಕರಿಸುವಂತೆ ಬ್ಲಾಕ್‌ಮೇಲ್ ಮತ್ತು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ಮಹಿಳೆ ಈಗ ಉಲ್ಟಾ ಒಡೆದಿದ್ದಾರೆ . ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+