ರಸ್ತೆ ಅಪಘಾತದಲ್ಲಿ ಸುಳ್ಯದ ಯುವತಿ ದುರ್ಮರಣ ...!
ಸುಳ್ಯ: ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸುಳ್ಯದ ಯುವತಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸುಳ್ಯದ ಕಂದಡ್ಕದ ಶಶಿಕಲಾ ಭಟ್ ಎಂಬವರ ಪುತ್ರಿ ಕ್ಷಿಪ್ರ (27) ಎಂಬ ಯುವತಿ ಶನಿವಾರ ರಾತ್ರಿ ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಜಿಲ್ಲೆಯ ಆದೋನಿ ಶಿವಾನಿ ಶಿರಗುಪ್ಪ ರಸ್ತೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಕ್ಷಿಪ್ರ ಅವರು ಸಹದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದೆ. ನಿದ್ದೆಯ ಮಂಪರಿನಲ್ಲಿ ಕಾರಿನ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇತರ ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ. ಶಶಿಕಲಾ ಅವರಿಗೆ ಏಕಮಾತ್ರ ಪುತ್ರಿಯಾಗಿದ್ದ ಕ್ಷಿಪ್ರ ಅವರು ಸುಳ್ಯದ ಕೆವಿಜಿ ಕಾಲೇಜಿನಲ್ಲಿ ಡಿಫ್ಲೋಮಾ ಮಾಡಿ ನಿಟ್ಟೆಯಲ್ಲಿ ಎಂ.ಟೆಕ್ ಮುಗಿಸಿ ಬೆಂಗಳೂರಿನಲ್ಲಿ ಸಾಪ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಾ ತಾಯಿಯ ಜತೆಗೆ ನೆಲೆಸಿದ್ದರು ಎಂದು ತಿಳಿದು ಬಂದಿದೆ.